Shamanur Shivashankarappa Death: Senior Congress MLA Shamanur Shivashankarappa passes away
Shamanur Shivashankarappa Death: ಕಾಂಗ್ರೆಸ್‌ನ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
Shamanur Shivashankarappa ;ದಾವಣಗೆರೆ (Davanagere) ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ( Shamanur Shivashankarappa )ವಿಧಿವಶರಾಗಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಡಿಸೆಂಬರ್ 14) ಸಂಜೆ ಕೊನೆಯುಸಿರೆಳೆದಿದ್ದಾರೆ.
Shamanur Shivashankarappa; 94 ವರ್ಷದ ಶಾಮನೂರು ಶಿವಶಂಕರಪ್ಪ ,ಅವರಿಗೆ 94 ವಯಸ್ಸಾಗಿದ್ದು, ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದ್ರೆ, ವಯೋಸಹಜ ಅನಾರೋಗ್ಯದ ಹಿನ್ನೆಲೆ ಕಳೆ ದಿನಗಳಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆಗಲೇ ಬೇರೆ ಬೇರೆ ಸುದ್ದಿ ಹರಿದಾಡಿದ್ದರಿಂದ ಈ ಬಗ್ಗೆ ಪುತ್ರ, ಸಚಿವ ಎಸ್ಎಸ್ ಮಲ್ಲಿಕಾರ್ಜುನ ಆವರು ಪ್ರತಿಕ್ರಿಯಿಸಿ ತಮ್ಮ ತಂದೆ ಚೆನ್ನಾಗಿದ್ದಾರೆ. ಗುರು ಹಿರಿಯರ ಆಶೀರ್ವಾದದಿಂದ ಇನ್ನೊಂದು ವಾರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದ್ದರು. ಆದ್ರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಮನೂರು ಅವರಿಗೆ ಕಳೆದೊಂದು ತಿಂಗಳಿಂದ ಐಸಿಯುನಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
Shamanur Shivashankarappa ಅವರು 1931 ಜೂನ್ 16ರಂದು ಶಾಮನೂರು ಕಲ್ಲಪ್ಪ – ಶಾಮನೂರು ಸಾವಿತ್ರಮ್ಮ ದಂಪತಿ ಪುತ್ರನಾಗಿ ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು. ಮೃತರು ಪತ್ನಿ ಪಾರ್ವತಮ್ಮ, ನಾಲ್ವರು ಪುತ್ರಿಯರಾ ಡಾ. ಮಂಜುಳಾ ಶಿವಶಂಕರ್, ಸುಧಾ ಪಾಟೀಲ್, ಡಾ. ಶೈಲಜಾ ಭಟ್ಟಾಚಾರ್ಯ, ಮೀನಾ ಡಾ. ಶರಣ್ ಪಾಟೀಲ್ ಹಾಗೂ ಮೂವರು ಗಂಡು ಮಕ್ಕಳಾದ ಎಸ್.ಎಸ್ ಬಕ್ಕೇಶ್, ಎಸ್.ಎಸ್ ಗಣೇಶ್, ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ಅಪಾರ ಬಂಧು ಬಳಗವನ್ನಗಲಿದ್ದಾರೆ.
ಶಾಮನೂರು ಶಿವಶಂಕರಪ್ಪನವರು 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗುವ ಮೂಲಕ ರಾಜಕೀಯ ಪ್ರವೇಶಿಸಿದರು. 1971 ರಿಂದ 1973ರ ವರೆಗೆ ಅವಿಭಜಿತ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1980ರಲ್ಲಿ ಲೋಕಸಭಾ ಚುನಾವಣೆಗೆ ಅರಸು ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಸ್ಪರ್ಧಿಸಿ ಇಂದಿರಾ ಗಾಂಧಿ ಕಾಂಗ್ರೆಸ್ ಅಭ್ಯರ್ಥಿ ಟಿ.ವಿ ಚಂದ್ರಶೇಖರಪ್ಪರ ವಿರುದ್ಧ ಪರಾಭವಗೊಂಡರು. ಇದಾದ ಬಳಿಕ 1994ರಲ್ಲಿ ನಡೆದ 10ನೇ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಖಾಡಕ್ಕಿಳಿದ ಅವರು ಬಿಜೆಪಿ ಅಭ್ಯರ್ಥಿ ಕೆ.ಬಿ ಶಂಕರನಾರಾಯಣರನ್ನ ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು.
1997 ರಲ್ಲಿ ಲೋಕಸಭಾ ಚುನಾವಣೆಗೆ ಸ್ಫರ್ಧಿಸಿದ ಶಿವಶಂಕರಪ್ಪ, ಬಿಜೆಪಿ ಅಭ್ಯರ್ಥಿ ಜಿ.ಮಲ್ಲಿಕಾರ್ಜುನಪ್ಪ ಅವರನ್ನ ಸೋಲಿಸಿ ಸಂಸದರಾದರು. 2004 ರಲ್ಲಿ ಶಿವಶಂಕರಪ್ಪ 2ನೇ ಬಾರಿ ಶಾಸಕರಾಗಿ ಆಯ್ಕೆಯಾದರು. ಆ ನಂತ್ರ 2008 ರಲ್ಲಿ 3ನೇ ಬಾರಿಗೆ. 2013 ರಲ್ಲಿ 4ನೇ ಬಾರಿಗೆ, 2018ರಲ್ಲಿ 5ನೇ ಬಾರಿಗೆ ಹಾಗೂ 2023ರಲ್ಲಿ 6ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 2013 ರಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಸಂಪುಟದಲ್ಲಿ ಎರಡೂವರೆ ವರ್ಷ ತೋಟಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
Shamanur Shivashankarappa ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ತೋಟಗಾರಿಕೆ ಸಚಿವರಾಗಿದ್ದು ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದರಾಗಿದ್ದಾರೆ. 1931ರ ಜೂನ್ 16ರಂದು ದಾವಣಗೆರೆಯಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಧಾನಸಭೆಯ ಸದಸ್ಯರಾಗಿದ್ದು, ಅವರು ಭಾರತದಲ್ಲಿ ರಾಜ್ಯ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾಗಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆ ಭೇಟಿ ನೀಡಿ ಶಿವಶಂಕರಪ್ಪ ಅವರ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದ್ದರು. ಹಾಗೇ ಅದೇ ವೇಳೆ ಆಸ್ಪತ್ರೆಯಲ್ಲಿದ್ದ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಮ್ಮ ಮಾವನ ಆರೋಗ್ಯ ಸ್ಥಿತಿ ಮತ್ತು ಚಿಕಿತ್ಸೆ ಕುರಿತು ಸಿಎಂಗೆ ವಿವರಿಸಿದ್ದರು. ಹೀಗೆ ಸಿಎಂ ಸೇರಿದಂತೆ ಹಲವು ರಾಜಕೀಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ವಿಚಾರಿಸಿದ್ದರು. ಇನ್ನು ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಸುಧಾರಣೆಯಾಗಲಿ ಎಂದು ದಾವಣಗೆರೆಯಲ್ಲಿ ಅವರ ಅಭಿಮಾನಿಳಿಂದ ಪ್ರಾರ್ಥನೆ, ಪೂಜೆಗಳು ನಡೆದಿದ್ದವು.
ತಮ್ಮ ನಾಯಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ದಾವಣಗೆರೆಯ ಎಂಸಿಸಿ ಎ ಬ್ಲಾಕ್ ನಲ್ಲಿರುವ ಶಾಮನೂರು ಶಿವಶಂಕರಪ್ಪನವರ ನಿವಾಸದತ್ತ ದೌಡಾಯಿಸುತ್ತಿದ್ದಾರೆ.
ಹಲವು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದು, ಸಚಿವರೂ ಸಹ ಆಗಿದ್ದರು. ಅಲ್ಲದೇ ದಾವಣಗೆರೆಯ ಅಂಗವಿಕಲರ ಆಶಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್‍ನ ಅಧ್ಯಕ್ಷ, ಅಖಿಲ ಭಾರತ ವೀರಶಿವ ಮಹಾಸಭೆಯ ಅಧ್ಯಕ್ಷ, ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆ ಹಾಗೂ ಬಾಪುಜಿ ಎಂಜಿನಿಯರಿಂಗ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದರು.
ಭಾರತದ ಅತ್ಯಂತ ಹಿರಿಯ ಶಾಸಕರಾಗಿ ಎನಿಸಿಕೊಂಡಿದ್ದ ಶಾಮನುರ ಶಿವಶಂಕರಪ್ಪ ಅವರು ಜೂನ್ 16, 1931 ರಂದು ದಾವಣಗೆರೆಯಲ್ಲಿ ಜನಿಸಿದ್ದ ಇವರು, ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ.